ಶಿವಮೊಗ್ಗ: ಮಾದಿಗ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮವಹಿಸಿದ್ದೇನೆ, ಶಿವಮೊಗ್ಗದಲ್ಲಿ ಮಾಜಿ ಸಚಿವ ಆಂಜನೇಯ
ಅತ್ಯಂತ ಹಿಂದುಳಿದ ಸಮಾಜವಾದ ಮಾದಿಗ ಸಮಾಜದ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಮಾದಾರ ಮಹಾಸಭೆಯನ್ನು ಸ್ಥಾಪಿಸಿದ್ದೇವೆ ಎಂದು ಮಾಜಿ ಸಚಿವ ಹಾಗೂ ಮಹಾಸಭೆಯ ಪ್ರಮುಖರಾದ ಆಂಜನೇಯ ಹೇಳಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಈ ಸಂಘಟನೆಯ ಸಲುವಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಈ ಮಹಾಸಭೆಯ ಅಧ್ಯಕ್ಷರಾದ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪನವರ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಇತ್ತೀಚೆಗೆ ಒಳಮೀಸಲಾತಿ ಜಾರಿಯಾಗಿದೆ. ಸಣ್ಣಪುಟ್ಟ ಲೋಪದೋಷಗಳಿಂದ ಅಲೆಮಾರಿ ಸಮುದಾಯ ಹೈಕೋರ್ಟ್ನಲ್ಲಿ ಜಾರಿಗೆ ತಡಯಾಜ್ಞೆ ತಂದಿದ್ದಾರೆ.