ಬೆಂಗಳೂರು ಉತ್ತರ: ಅವೈಜ್ಞಾನಿಕ ನಿರ್ಮಾಣ, ದುರ್ಬಲ ಕಟ್ಟಡಗಳನ್ನು ಗುರುತಿಸಿ ನೋಟಿಸ್ ಜಾರಿ - ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್
ನಗರದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರತ್ ಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಆಗಸ್ಟ್ 17ರಂದು ಭೇಟಿ ನೀಡಿ ವಾಪಾಸಾದ ಬಳಿಕ ಬೆಳಿಗ್ಗೆ 11:30ರ ಸುಮಾರಿಗೆ ಸದಾಶಿವನಗರದ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.