ಚಿಂಚೋಳಿ ತಾಲೂಕಿನ ಚಂದಾಪೂರದಲ್ಲಿರುವ ಬಿಎಸ್ಎನ್ಎಲ್ ಕಚೇರಿಯಲ್ಲಿ ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆವರಣದಲ್ಲಿರುವ ಗಿಡಗಳನ್ನು ಕತ್ತರಿಸಲಾಗಿದೆ ಎಂದು ಸ್ಥಳಿಯರು ಅಸಮದಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ವಯರ್ಗಳು ಮತ್ತು ತಂತಿಗಳಿಗೆ ಬೆಂಕಿ ಹಚ್ಚಿರುವ ಕಾರಣ ಪರಿಸರಕ್ಕೆ ಹಾನಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡು ಕಾರಣ ಸ್ಥಳೀಯರಲ್ಲಿ ಭೀತಿ ಸೃಷ್ಟಿಯಾಯಿತು ಎಂದು ಸ್ಥಳಿಯರು ಭಾನುವಾರ 3 ಗಂಟೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.