ಮಾನ್ವಿ ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಶಿವರಾಜ .ವಿ. ಸಿದ್ದೇಶ್ವರ ಉದ್ಘಾಟಿಸಿ ಮಾತನಾಡಿ ಭಾರತ ದೇಶದ ಪ್ರಥಮ ರಾಷ್ಟ್ರಪತಿಗಳಾದ ಡಾ.ರಾಜೇಂದ್ರ ಪ್ರಸಾದ್ ರವರು ವಕೀಲರಾಗಿದ್ದರು ಅದ್ದರಿಂದ ಅವರ ಜನ್ಮದಿನವನ್ನು ವಕೀಲರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ವಕೀಲರು ಹಾಗೂ ನ್ಯಾಯಾಧೀಶರು ದೇಶದ ಕಾನೂನು ಹಾಗೂ ಸಂವಿಧಾನದ ಜ್ಞಾನವನ್ನು ಹೊಂದುವುದು ಅಗತ್ಯವಾಗಿದೆ. ವಕೀಲರು ಕಾನೂನಿನ ಜ್ಞಾನದ ಜೋತೆಗೆ ಬದುಕಿನ ಜ್ಞಾನವನ್ನು ಪಡೆದುಕೊಂಡಲ್ಲಿ ಜೀವನದಲ್ಲಿ ಪ್ರಬುದ್ದರಾಗಿ ಬದುಕುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.