ಹುಬ್ಬಳ್ಳಿಯ ಗೋಕುಲ್ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಪಕ್ಷದ ಕಾರ್ಯಕರ್ತರು ಹಾಗೂ ಉದ್ಯಮಿಗಳೊಂದಿಗೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ರಮೇಶ ಪಾಟೀಲ, ಹು.ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ರಾಜು ಕಾಳೆ, ಪಾಲಿಕೆ ಸದಸ್ಯರಾದ ಶ್ರೀಮತಿ ರೂಪಾ ಶೆಟ್ಟಿ, ಪ್ರಮುಖರಾದ ಚೇತನ ಬರದ್ವಾಡ, ರಮೇಶ ಬೆಳಗಾವಿ, ರವಿರಾಜ ಕೊಡ್ಲಿ, ರವಿ ನಾಯಕ್ ಸೇರಿದಂತೆ ಉಪಸ್ಥಿತರಿದ್ದರು.