ಗಜೇಂದ್ರಗಡ: ಪಟ್ಟಣದಲ್ಲಿ ಮನೆ ಮನೆಗೆ ಪೊಲೀಸರು ಭೇಟಿ, ಅಗತ್ಯ ಮಾಹಿತಿ ರವಾನೆ
ಸಮುದಾಯ ಪೊಲೀಸ್ ವ್ಯವಸ್ಥೆ ಬಲಪಡಿಸುವ ದೃಷ್ಠಿಯಿಂದ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಎಂಬ ಪರಿಕಲ್ಪನೆಯಡಿ ಗಜೇಂದ್ರಗಡ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಕುಟುಂಬ ಸದಸ್ಯರಿಂದ ಅಗತ್ಯ ಮಾಹಿತಿಯನ್ನು ಪಡೆದರು. ಈ ವೇಳೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಉದ್ದೇಶದ ಕುರಿತು ಅರಿವು ಪೊಲೀಸರು ಮನೆಯ ಮಾಲಕರಿಗೆ ಅಗತ್ಯ ಮಾಹಿತಿ ನೀಡಿದರು.