ಶಿರಸಿ: ದೇವಿಮನೆ ಘಟ್ಟದಲ್ಲಿ ಮತ್ತೇ ಗುಡ್ಡ ಕುಸಿತ : ಶಿರಸಿ - ಕುಮಟಾ ರಸ್ತೆ ಸಂಚಾರ ಸಂಪೂರ್ಣ ಬಂದ್
ಕುಮಟಾ : ಕುಮಟಾ ತಾಲೂಕಿನ ವ್ಯಾಪ್ತಿಯ ದೇವಿಮನೆ ಘಟ್ಟದಲ್ಲಿ ಮತ್ತೆ ಕುಸಿದ ಗುಡ್ಡವಾಸಿದ್ದು, ಶಿರಸಿ - ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766(ಇ) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ ಮಣ್ಣು ತೆಗೆದು ಶನಿವಾರ ರಾತ್ರಿ ಲಘು ವಾಹನ ಸಂಚಾರಕ್ಕೆ ಬಿಡಲಾಗಿತ್ತು.ಆದರೆ ಭಾನುವಾರ ಬೆಳಿಗ್ಗೆ ಮತ್ತೆ ಕುಸಿದ ಜಾಗದಲ್ಲೇ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು,ಮರಗಳು ಬಿದ್ದಿದೆ. ಹೆದ್ದಾರಿಯ ಮೇಲೆ ಕಲ್ಲು, ಮಣ್ಣು ಬಿದ್ದಿರುವ ಹಿನ್ನಲೆಯಲ್ಲಿ ಭಾನುವಾರ ಬೆಳಗಿನಿಂದ ಕುಮಟಾ-ಶಿರಸಿಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ.