ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ 7:30 ರ ಸುಮಾರಿಗೆ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ. ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ.