ಬೆಂಗಳೂರು ಉತ್ತರ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಧ್ವಜಾರೋಹಣ
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಛೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.ಬಿಬಿಎಂಪಿ ಆಡಳಿತಗಾರ ತುಷಾರ್ ಗಿರಿ ನಾಥ್ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಪ್ರೀತಿ ಗೆಹ್ಲೋಟ್, ಅಪರ ಆಯುಕ್ತರಾದ ಅಜಿತ್ ಹೆಗ್ಡೆ, ಮುಖ್ಯ ಲೆಕ್ಕಾಧಿಕಾರಿಯಾದ ಬೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.