ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ಉತ್ಸವ: ಎಲ್ಲರನ್ನು ಆಕರ್ಷಿಸಿದ ಶಾಲಾ ಮಕ್ಕಳು ತಾವೇ ತಯಾರಿಸಿ ಪ್ರದರ್ಶಿಸಿದ ವಿಜ್ಞಾನ, ಗಣಿತ, ಸಾಹಿತ್ಯ, ಕಲೆ ಮತ್ತು ತಂತ್ರಜ್ಞಾನದ ವೈವಿಧ್ಯಮಯ ಪ್ರಾತ್ಯಕ್ಷಿತೆಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ, ಸಾಹಿತ್ಯ, ಕಲೆ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು, ಸಂಶೋಧನಾ ಮನೋಭಾವನೆ ಬೆಳೆಸಲು ಮತ್ತು ವೈಜ್ಞಾನಿಕ ಚಿಂತನೆಯನ್ನು ಪ್ರೋತ್ಸಾಹಿಸಲು ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆಯಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿಂದು ವಿಜ್ಞಾನ ಉತ್ಸವ-2025 ನ್ನು ಆಯೋಜನೆ ಮಾಡಲಾಗಿತ್ತು. ಈ ಉತ್ಸವದಲ್ಲಿ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನವ