ಬೆಂಗಳೂರು ಉತ್ತರ: ನಾಳೆ ದರ್ಶನ್ ಪಾಲಿಗೆ ಬಿಗ್ ಡೇ – ಸುಪ್ರೀಂ ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ ಅಂದರೆ ಗುರುವಾರ ಬೆಳಗ್ಗೆ 11 ಗಂಟೆಗೆ ತೀರ್ಮಾನವಾಗಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿತ್ತು. ವಾದ, ಪ್ರತಿವಾದ ಆಲಿಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.