ಕಾರವಾರ: ಲೈಂಗಿಕ ಕಿರುಕುಳ ಆರೋಪ: ಪೂಜಗೇರಿ ಮಹಾವಿದ್ಯಾಲಯದ ಉಪನ್ಯಾಸಕನ್ನನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರಿಂದ ಜಿಲ್ಲಾಡಳಿತಕ್ಕೆ ಮನವಿ
ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಸ್ಥಳೀಯರು ಆಗಮಿಸಿ ಅಂಕೋಲಾದ ಪೂಜಗೇರಿ ಮಹಾವಿದ್ಯಾಲಯದ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ವಿರುದ್ಧ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ, ಮಹಿಳಾ ಮುಖಂಡರು, ಮೀನುಗಾರ ಮುಖಂಡರು ಮತ್ತು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.