ಹಾಸನ: HIMS ಆಸ್ಪತ್ರೆಯ ಅಪರೇಷನ್ ಯಡವಟ್ಟು ವಿಚಾರಕ್ಕೆ ನಗರದಲ್ಲಿ ಸಚಿವ ಕೃಷ್ಣಬೈರೇಗೌಡ ಅಸಮಾಧಾನ
Hassan, Hassan | Sep 23, 2025 ಹಾಸನ: ಹಾಸನ ಜಿಲ್ಲಾಸ್ಪತ್ರೆಯಲ್ಲಿ ಎಡಗಾಲಿಗೆ ಅಳವಡಿಸಲಾಗಿದ್ದ ರಾಡ್ ತೆಗೆಯಲು ಬಲಗಾಲಿಗೆ ಅಪರೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಡಿಪಿ ಸಭೆಯಲ್ಲಿ ತಪ್ಪಿತಸ್ಥ ವೈದ್ಯನ ಬಗ್ಗೆ ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಶಾಸಕ ಸಿಮೆಂಟ್ ಮಂಜು ಅವರು ಪ್ರಸ್ತಾಪಿಸಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಇಂದು ಒಂದು ಹೆಣ್ಣು ಮಗಳು ಎರಡು ಕಾಲುಗಳಿಗೆ ಗಾಯ ಮಾಡಿಕೊಂಡು ಹಾಸಿಗೆ ಹಿಡಿದಿದ್ದಾರೆ ಈ ರೀತಿಯ ಬೇಜವಾಬ್ದಾರಿ ಸರಿಯಲ್ಲ ಎಂದರು.