ಮಳವಳ್ಳಿ : ಡಿಸೆಂಬರ್ 10 ರಂದು ಬುಧವಾರ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿವಿರವೊಂದು ಏರ್ಪಾಡಾಗಿದೆ. ಹಲಗೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ. ಸೌಮ್ಯಶ್ರೀ ಶನಿವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರ ಮಾರ್ಗದರ್ಶನದಂತೆ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ನಡೆಯುವ ಶಿಬಿರದಲ್ಲಿ ಹೃದಯ ರೋಗ ತಜ್ಞರು. ಪಿಸ್ತುಲ. ಮತ್ತು ಶ್ರೀ ರೋಗ ತಜ್ಞರು . ಮಕ್ಕಳ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಿದ್ದಾರೆ ಎಂದರು.