ಕಂಪ್ಲಿ: ಪಂಚ ಗ್ಯಾರಂಟಿ ಯೋಜನೆ ಕುರಿತು ಸಣಾಪುರ ಗ್ರಾಮದಲ್ಲಿ ಬೀದಿ ನಾಟಕ
Kampli, Ballari | Nov 20, 2025 ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಬಡವರ ಪರ ಸರ್ಕಾರ ಎಂದು ನಿರೂಪಿಸಿದೆ ಎಂದು ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು ಹೇಳಿದರು. 10 ದಿನಗಳ ಕಾಲ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಪಂ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಕುರಿತ ಬೀದಿ ನಾಟಕ ಪ್ರದರ್ಶನಕ್ಕೆ ಕಂಪ್ಲಿ ತಾಲ್ಲೂಕಿನ ಸಣಾಪುರ ಮತ್ತು ಇಟಗಿ ಗ್ರಾಪಂ ಗಳಲ್ಲಿ ನ.20,ಗುರುವಾರ, ಮಧ್ಯಾಹ್ನ 12ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.