ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅಧಿಕಾರ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ: ನಗರದಲ್ಲಿ ನಗರಸಭೆ ಸದಸ್ಯ ಟಿ. ರಾಜಶೇಖರ್ ಆರೋಪ
ನೈಜ ಮಾಹಿತಿಯನ್ನು ನೀಡದೆ ಸುಳ್ಳು ಹೇಳಿಕೆ ನೀಡಿರುವ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅಧಿಕಾರವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ನಗರಸಭೆ ಬಿಜೆಪಿ ಸದಸ್ಯರುಗಳು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಹಿರಿಯ ಸದಸ್ಯ ಟಿ.ರಾಜಶೇಖರ್ ಮಾತನಾಡಿ, ಬಿಜೆಪಿಯಿಂದಲೇ ಆಯ್ಕೆಯಾಗಿದ್ದ ವರಸಿದ್ದಿ ವೇಣುಗೋಪಾಲ್ ಅವರನ್ನು ನಾವೆಲ್ಲರೂ ಬೆಂಬಲಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೆವು. ಆದರೆ ಅಧ್ಯಕ್ಷರಾದ ನಂತರ ಜನ ವಿರೋಧಿ ಆಡಳಿತ ನೀಡಿದ್ದಾರೆ. ಇದನ್ನು ನಾವು ಮೊದಲೇ ವಿರೋಧಿಸಿ ಅಂದು ಶಾಸಕರಾಗಿದ್ದ ಸಿ.ಟಿ.ರವಿ ಅವರ ಗಮನಕ್ಕೂ ತಂದಿದ್ದೆವು ಎಂದರು.