ಯಡ್ರಾಮಿ ತಾಲೂಕಿನ ಸಾಥಖೇಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡದಹಳ್ಳಿ ಗ್ರಾಮದಲ್ಲಿ ಶಾಖಾ ಗ್ರಂಥಾಲಯವನ್ನು ಪಂಚಾಯಿತಿ ಅಧ್ಯಕ್ಷ ಮಲ್ಲಪ್ಪ ಹೊಸಮನಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಗ್ರಂಥಾಲಯದ ಸದುಪಯೋಗ ಪಡೆದುಕೊಂಡು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು. ಪಂಚಾಯಿತಿ ವ್ಯಾಪ್ತಿಯ ಐದು ಹಳ್ಳಿಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ ಅಮಿನಗಡ, ನೆರೆಗಾ ಅಧಿಕಾರಿಗಳು, ಶಿಕ್ಷಕರು, ಬಿಆರ್‌ಸಿ/ಸಿಆರ್‌ಸಿಗಳು ಊರಿನ ಹಿರಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಎಂದ