ಕೊಪ್ಪಳ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಗರದಲ್ಲಿ ಎಸ್ ಪಿ ಡಾ.ರಾಮ ಎಲ್ ಅರಸಿದ್ದಿಯಿಂದ ಧ್ವಜಾರೋಹಣ
Koppal, Koppal | Sep 17, 2025 ಇಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಎಸ್ ಪಿ ಡಾ.ರಾಮ ಎಲ್ ಅರಸಿದ್ದಿ ಧ್ವಜಾರೋಹಣ ನೆರವೇರಿಸಿದರು. ಸೆಪ್ಟೆಂಬರ್ 17 ರಂದು ಬೆಳಗ್ಗೆ 8-00 ಗಂಟೆಗೆ ನಡೆದ ಧ್ವಜಾರೋಹಣ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಾರ್ಯಾಲಯದ ಎಲ್ಲಾ ಘಟಕಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ಸ್ಥಳೀಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.