ಧಾರವಾಡ: ಸರ್ಕಾರಿ ಆವರಣದಲ್ಲಿ ಆರ್ ಎಸ್ ಎಸ್ ಸೇರಿದಂತೆ ಖಾಸಗಿ ಕಾರ್ಯಕ್ರಮ ನಡೆಸದಂತೆ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆ
ಆರ್ಎಸ್ಎಸ್ ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ಸರಕಾರಿ ಆವರಣದಲ್ಲಿ ನಡೆಸದಂತೆ ನೀಡಿದ್ದ ಸರಕಾರದ ಆದೇಶಕ್ಕೆ ಇಲ್ಲಿಯ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ಸರಕಾರದ ಆದೇಶವನ್ನು ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಂಗಳವಾರ ವಾದ-ವಿವಾದ ಆಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರು ಸಂವಿಧಾನ ನೀಡಿರುವ ಹಕ್ಕನ್ನು ಸರಕಾರಿ ಆದೇಶ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ