ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ: ವೈಭವದ ಪಲ್ಲಕ್ಕಿ ಮೆರವಣಿಗೆ
ಚಿತ್ರದುರ್ಗದ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ ಭಾಗವಾಗಿ ಇಂದು ಪಲ್ಲಕ್ಕಿ ಉತ್ಸವ ನಡೆಯಿತು. ಬಸವಣ್ಣ ಮತ್ತು ಅಲ್ಲಮಪ್ರಭುಗಳ ಭಾವಚಿತ್ರ ಹಾಗೂ ವಚನ ಗ್ರಂಥಗಳ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಲಾ ತಂಡಗಳು ಮತ್ತು ಮಠದ ಆನೆ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿದ್ದವು.