ಧಾರವಾಡ: ನವೆಂಬರ್ 5 ರಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ: ನಗರದಲ್ಲಿ ಕುಲಪತಿ ಡಾ.ಸಿ.ಬಸವರಾಜು
ಧಾರವಾಡ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ನ. 5 ರಂದು 7ನೇ ಘಟಿಕೋತ್ಸವವನ್ನು ಆಯೋಜಿಸಿದೆ. ಈ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ವಿ. ನಾಗರತ್ನಾ, ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ ಮತ್ತು ಹಿರಿಯ ನ್ಯಾಯವಾದಿ ವಿ. ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ. ಸಿ. ಬಸವರಾಜು ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.