ಕಲಬುರಗಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಮೇಲಿನ ದೌರ್ಜನ್ಯ ಮತ್ತು ಸುಳ್ಯಾ ಶಾಸಕಿಗೆ ಸಾಮಾಜಿಕ ಜಾಲತಾಣದಲ್ಲಿ ಶೃದ್ದಾಂಜಲಿ ಪೋಸ್ಟ್ ಘಟನೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿದೆ.. ಜನವರಿ 10 ರಂದು ಮಧ್ಯಾನ 12 ಗಂಟೆಗೆ ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದರು. ಬಳಿಕ ಡಿಸಿ ಕಚೇರಿ ಬಳಿ ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ಘಟನೆಯನ್ನ ತೀವ್ರವಾಗಿ ಖಂಡಿಸಿದರು. ಇನ್ನೂ ಸುಜಾತ ಹಂಡಿ ಮೇಲೆ ಪೊಲೀಸರು ಅಮಾನುಷವಾಗಿ ನಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ