ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ದೇಶಪ್ರೇಮಿಯಾಗಿದ್ದರು. ಅವರ ಕೊನೆಯ ಭಾಷಣವನ್ನು ಭಾರತೀಯರೆಲ್ಲರೂ ಓದಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವರಾದ ಎನ್.ಮಹೇಶ್ ಹೇಳಿದರು. ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿಬ್ಬಾಣ ದಿವಸ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ ಮಾತನಾಡಿದರು. ಅಂಬೇಡ್ಕರ್ ರವರ ಕೊನೆಯ ಭಾಷಣ ಓದಿದಾಗ ಮಾತ್ರ ಅವರು ಅರ್ಥವಾಗುತ್ತಾರೆ. ದೇಶಕ್ಕಾಗಿ, ದೇಶದ ಐಕ್ಯತೆಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದರು.