ಬೈಲಹೊಂಗಲ: ಅಕ್ಟೋಬರ್ 23ರಿಂದ ಕಿತ್ತೂರು ಉತ್ಸವ: ಮೈಸೂರು ಮಾದರಿಯಲ್ಲಿ ಅದ್ಧೂರಿ ಆಚರಣೆಗೆ ಸಿದ್ಧತೆ!
ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ. 2 ಕೋಟಿ ರೂ. ಅನುದಾನದಲ್ಲಿ ನಡೆಯುವ ಈ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಆರೋಗ್ಯ ಮೇಳ ಹಾಗೂ ಜಾನುವಾರು ಜಾತ್ರೆ ಆಯೋಜಿಸಲಾಗಿದೆ. ಭದ್ರತೆಗಾಗಿ 450ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.