ಯಲ್ಲಾಪುರ:ಗ್ಯಾರಂಟಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ಬದ್ದವಾಗಿದ್ದು,ಯೋಜನೆಯ ವ್ಯಾಪ್ತಿಯಿಂದ ಅರ್ಹರು ಹೋರಗುಳಿಯದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಹೇಳಿದರು. ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಲ್ಲಾಪುರ ಇದರ ಮಾಸಿಕ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.ಇದೆ ಸಂದರ್ಭದಲ್ಲಿ ಪತ್ರ ಕರ್ತರ ಸಂಘದ ನೂತನ ಪದಾಧಿಕಾರಿಗಳನ್ನು ಗೌರವಿಸಿದರು.