ಶೃಂಗೇರಿ: ಕೆರೆಕಟ್ಟೆ ಬಳಿ ಕಾರು - ಲಾರಿ ಅಪಘಾತ.! ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು.!
ಕಾರು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಬಳಿ ನಡೆದಿದೆ. ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.