ಕಲಬುರಗಿ: ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಭೇಟಿ ನೀಡಿ, ಬಾಕಿ ಇರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿದರು. ಅಲ್ಲದೆ, ಸಿಬ್ಬಂದಿಗಳ ಕರ್ತವ್ಯ ದಿನಚರಿಯನ್ನು ಪರಿಶೀಲಿಸಿ, ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚನೆಗಳನ್ನು ನೀಡಿದ್ದಾರೆ.