ಕೋಲಾರ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಇತ್ತಿಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ 18 ವರ್ಷ ಪೂರ್ಣಗೊಳ್ಳಲು ಎರಡರಿಂದ ಮೂರು ತಿಂಗಳಲ್ಲಿ ವಯಸ್ಸಿನ ಅಂತರವಿದ್ದರೆ ಅಂತಹ ಪ್ರಕರಣಗಳಲ್ಲಿ ಮಾನವೀಯತೆ ದೃಷ್ಟಿಯಿಂದ ದೂರು ದಾಖಲಿಸದಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಕೆ.ವೈ ನಂಜೇಗೌಡ ಅವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಬೇಕು ಎಂದು ಎಎಪಿ ಜಿಲ್ಲಾಧ್ಯಕ್ಷ ವೆಂಕಟಾಚಲಪತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಗಾಂಧಿವನದ ಬಳಿ ಶನಿವಾರ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆಯಂತೆ ಹೆಣ್ಣು ಮಕ್ಕಳಿಗೆ 18 ಪೂರ್ಣಗೊಳ್ಳುವವರೆಗೆ ವಿವಾಹ ಮಾಡಬಾರದು ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ ಎಂದ್ರು