ಮದ್ದೂರು: ಮದ್ದೂರಿನಲ್ಲಿಯೇ ಟ್ರಾಮಾ ಕೇರ್ ಸೆಂಟರ್ - ಶಾಸಕ ಕೆ.ಎಂ.ಉದಯ್ ಮಾಹಿತಿ
Maddur, Mandya | Oct 12, 2025 ತಾಲೂಕಿನ ಜನತೆಗೆ ಉತ್ತಮ ಚಿಕಿತ್ಸೆ ಹಾಗೂ ಆರೋಗ್ಯದ ಸೌಲಭ್ಯಗಳ ದೃಷ್ಟಿಯಿಂದ ನಗರದಲ್ಲಿ ಟ್ರಾಮಾಕೇರ್ ಸೆಂಟರ್ ತೆರೆಯಲು ಸಚಿವರುಗಳ ಸಭೆಯಲ್ಲಿ ತೀರ್ಮಾನವಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು. ಮದ್ದೂರು ನಗರದ ಶ್ರೀ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮದ್ದೂರು ನಗರದಲ್ಲಿ ಟ್ರಾಮಾಕೇರ್ ಸೆಂಟರ್ ಆರಂಭಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಡಳಿತಾವಧಿಯಲ್ಲಿ ತೀರ್ಮಾನವಾಗಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಿಂದ ಆ ಕನಸು ಈಡೇರಲಿಲ್ಲ ಎಂದರು.