ಕಂಪ್ಲಿ: ಒಳ ಮೀಸಲಾತಿ ನೆಪದಲ್ಲಿ 50 ಸಾವಿರ ಶಿಕ್ಷಕರ ನೇಮಕಾತಿ ಮರಿಚಿಕೆ, ನಗರದಲ್ಲಿ ಎಂಎಲ್ಸಿ ನಮೋಶಿ
Kampli, Ballari | Oct 18, 2025 ಕಂಪ್ಲಿ: “ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡುತ್ತಿದೆ” ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಆರೋಪಿಸಿದರು. ಅ.17,ಶುಕ್ರವಾರ ರಾತ್ರಿ 8ಗಂಟೆಗೆ ಕಂಪ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಳ ಮೀಸಲಾತಿ ಎಂಬ ನೆಪದಲ್ಲಿ ಈ ಭಾಗದ ಸುಮಾರು 50 ಸಾವಿರ ಶಿಕ್ಷಕರ ನೇಮಕಾತಿ ಆಗದೆ ಬಾಕಿ ಉಳಿದಿದೆ. ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಕಡಿಮೆ ಫಲಿತಾಂಶ ಪಡೆಯುತ್ತಿದ್ದಾರೆ.ಶಿಕ್ಷಕರ ನೇಮಕಾತಿ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.