ವಾಸವಿ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವವು ಡಿ.6 ಹಾಗೂ 7 ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕುಮಾರಕೃಷ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಡಿ.6 ರ ಸಂಜೆ 4 ಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಸಂಸ್ಕೃತಿ ಹೆಸರಿನಲ್ಲಿ ನಡೆಯುವ ಈ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ಕೊಡಲಿದ್ದಾರೆ ಎಂದು ತಿಳಿಸಿದರು. 1983 ರಲ್ಲಿ 4 ಮಂದಿ ವಿದ್ಯಾರ್ಥಿಗಳಿಂದ ಆರಂಭಗೊಂಡ ಶಾಲೆಯಲ್ಲೀಗ 2400 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು.