ವಿಧಾನಸೌಧದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes)ದ ಸಂಬಂಧ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಸಂಘಟನಾ ಸಮಿತಿಯವರೊಂದಿಗೆ ಸಭೆ ನಡೆಸಿ ಚಲನಚಿತ್ರೋತ್ಸವದ ಆಯೋಜನೆ ಹಾಗೂ ಸಿದ್ಧತೆಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.