ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ.