ಕಲಬುರಗಿ : ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ಜೋರಾಗ್ತಿವೆ.. ಇತ್ತ ಕಲಬುರಗಿಯಲ್ಲಿ ಸಹ ಪ್ರತಿಭಟನೆ ಕಾವು ಪಡೆದಿದ್ದು, ಚಿಂಚೋಳಿ ಪಟ್ಟಣದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ರ ಅಣಕು ಶವ ಯಾತ್ರೆ ಮಾಡುವ ಮೂಲಕ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ನವೆಂಬರ್ 6 ರಂದು ಮಧ್ಯಾನ 12 ಗಂಟೆಗೆ ಪಟ್ಟಣದ ತಹಶಿಲ್ದಾರ್ ಕಚೇರಿವರೆಗೆ ಅಣಕು ಶವಯಾತ್ರೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು