ಚಿತ್ರದುರ್ಗ: ಕೊಡೇನಹಟ್ಟಿಯಲ್ಲಿ ಮೂರು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ
ಮೂರನೇ ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಯುವಕ ಸಾವನ್ನಪ್ಪಿದ್ದಾನೆ. ಕುಡಿದ ಮತ್ತಿನಲ್ಲಿ ಜಿಗಿದು ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಕೋಡೆನಹಟ್ಟಿ ಬಡಾವಣೆಯಲ್ಲಿ ನಡೆದಿದೆ. ಕೋಡೇನಹಟ್ಟಿಯ ಅನೀಲ ಕುಮಾರ(35)ಮೃತ ಯುವಕ ಎಂದು ತಿಳಿದು ಬಂದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅನೀಲ ಕುಮಾರ, ಬಿಜಿನಸ್ ಮಾಡ್ತೀನಿ ಅಂತಾ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.