ಮಳವಳ್ಳಿ: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ತಹಶಿಲ್ದಾರ್ ಲೋಕೇಶ್
ಮಳವಳ್ಳಿ: ತಾಲ್ಲೂಕು ಕಚೇರಿ ಯಲ್ಲಿ ಪ್ರತಿ ತಿಂಗಳಿಗೆ ಒಮ್ಮೆ ಹಾಗೂ ಹದಿನೈದು ದಿನಕ್ಕೊಮ್ಮೆ ಹೋಬಳಿ ಮಟ್ಟದಲ್ಲಿ ಕುಂದು ಕೊರತೆ ಸಭೆಯನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯಾರ್ಥಗೊಳಿಸಲಾಗುವುದು ಎಂದು ತಹಶಿಲ್ದಾರ್ ಡಾ ಲೋಕೇಶ್ ತಿಳಿಸಿದ್ದಾರೆ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಸಂಜೆ 5.30 ರ ವರೆವಿಗೂ ಜರುಗಿದ ಕುಂದು ಕೊರತೆ ಸಭೆಯಲ್ಲಿ ಸಾರ್ವ ಜನಿಕ ರಿಂದ ಅಹವಾಲು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು ಶೀಘ್ರದಲ್ಲಿಯೇ ಸಾರ್ವಜ ನಿಕರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾ ಗುವುದು ಎಂದು ಹೇಳಿದರು.