ಶಿವಮೊಗ್ಗ: ನಗರದ ಹೊರವಲಯದಲ್ಲಿ ಅಮ್ಜದ್ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಐದು ದಿನಗಳ ಹಿಂದೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಾಡು ಪ್ರದೇಶದಲ್ಲಿ ಆರೋಪಿ ಅಡಗಿರುವ ಕುರಿತು ಬಂದಂತಹ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿ ಅಕ್ಬರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಈ ವೇಳೆ ಪ್ರಾಣ ರಕ್ಷಣೆಗಾಗಿ ಪೊಲೀಸ್ ಇನ್ಸ್ಪೆಕ್ಟರ್ ಅಕ್ಬರ್ ಕಾಲಿಗೆ ಗುಂಡು ಹಾರಿಸಿದ್ದು ಆತನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ