ಮಡಿಕೇರಿ: ಅಂಗಾಂಗ ದಾನಿ ಯೋಗೇಶ್ ಮನೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ: ಕುಟುಂಬಕ್ಕೆ ಸಾಂತ್ವನ
ಮಡಿಕೇರಿಯ 22 ವರ್ಷದ ಯುವಕ ಯೋಗೇಶ್ ಅಂಗಾಂಗ ದಾನ ಮಾಡಿ ಹಲವರ ಪಾಲಿಗೆ ಬೆಳಕಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಯೋಗೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದ ಯೋಗೇಶ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.