ಚಿಕ್ಕಮಗಳೂರು: ದೇಶದ ಏಕತೆ, ಅಖಂಡತೆ, ರಾಷ್ಟ್ರೀಯತೆಗಳನ್ನು ನಮ್ಮ ಸಂವಿಧಾನ ಒಳಗೊಂಡಿದೆ : ಎಸ್.ಎಲ್ ಭೋಜೇಗೌಡ
ದೇಶದ ಏಕತೆ, ಅಖಂಡತೆ, ರಾಷ್ಟ್ರೀಯತೆ ಈ ಎಲ್ಲಾ ವಿಚಾರವನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಪ್ರಜಾಪ್ರಭುತ್ವದ ಮಹತ್ವವನ್ನು ನಮ್ಮ ಯುವಜನತೆ ಅರಿಯಬೇಕು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ಮತ್ತು ಆರೋಗ್ಯ ಅಂಬೇಡ್ಕರ್ ನೀಡಿರುವ ಸಂವಿಧಾನದ ಆಶಯವಾಗಿದ್ದು, ಈ ಆಶಯದಂತೆ ಪ್ರತಿಯೊಬ್ಬ ಪ್ರಜೆಯು ಅರಿತು ನಡೆದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.