ಬೆಂಗಳೂರು ಪೂರ್ವ: ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್
ಮುಂದಿನ ದಿನಗಳಲ್ಲಿ ಐಟಿ- ಬಿಟಿ ಕಂಪನಿಗಳ ಜೊತೆ ನಾನು ಹಾಗೂ ಐಟಿ, ಕೈಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರುಗಳು ಪ್ರತ್ಯೇಕವಾಗಿ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಟೀಕೆ ಟಿಪ್ಪಣಿ ಮಾಡುವವರಿಗೆ ನಮ್ಮ ಕೆಲಸವೇ ಉತ್ತರ ನೀಡುತ್ತದೆ. ನಾವು ನಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾವು ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಭಗವಂತ ಹಾಗೂ ಜನರು ನಮಗೆ ಆಶೀರ್ವಾದ ಮಾಡಿದ್ದು, ನಾವು ಅವರ ಸೇವೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಸಂಜೆ 4 ಗಂಟೆ ಸುಮಾರಿಗೆ "ಬೆಂಗಳೂರು ನಡಿಗೆ" ಅಭಿಯಾನದ ಅಂಗವಾಗಿ "ನಾಗರಿಕರೊಂದಿಗೆ ಸಂವಾದ"