ಮಂಗಳೂರು: ಎ 14ರಂದು ಪ್ರಧಾನಿ ಮೋದಿ ರೋಡ್‌ಶೋ ಹಿನ್ನೆಲೆ; ನಗರದಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
ಪ್ರಧಾನಿ ನರೇಂದ್ರ ಮೋದಿ ಎ.14ರಂದು ನಗರದ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2ರಿಂದ ಪ್ರಧಾನಿಯ ಕಾರ್ಯಕ್ರಮ ಮುಗಿಯುವವರೆಗೆ ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.