ರಾಯಚೂರು: ಬೂತಲದಿನ್ನಿ ಗ್ರಾಮದ ಬಳಿಯ ನಿರ್ಮಾಣ ಹಂತದ ಸೇತುವೆ ಕಾಮಗಾರಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭೇಟಿ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬುದುವಾರ ಮಧ್ಯಾಹ್ನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ತಿಳಿಸಿದ್ದಾರೆ.