ಬೀದಿನಾಯಿ ಹಾವಳಿ ತಡೆಗೆ ಕ್ರಮ: ಅಧಿಕಾರಿಗಳಿಗೆ ನಗರದಲ್ಲಿ ಜಿಲ್ಲಾಧಿಕಾರಿ ರವಿ ಸೂಚನೆ ಕೋಲಾರ : ಬೀದಿನಾಯಿಗಳ ಹಾವಳಿ ತಪ್ಪಿಸಲು ಸಾರ್ವಜನಿಕರಿಗೆ ಅರಿವು ಮೂಡಿಸಿ ಮತ್ತು ದಾಳಿ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶನಿವಾರ ೨ ಗಂಟೆಯಲ್ಲಿ ಬಿದಿನಾಯಿಗಳ ಹಾವಳಿ ನಿಯಂತ್ರಣ ಕ್ರಮಗಳ ಕುರಿತು ಸಭೆಯಲ್ಲಿ ಅವರು ಮಾತನಾಡಿದರು. ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದರು.