ರಾಯಚೂರು: ಜಿಲ್ಲೆಯಲ್ಲಿ ಒಟ್ಟು 12 ಕೇಸ್ ಗಳಿಂದ 7 ಕೆಜಿ 100 ಗ್ರಾಂ ಗಾಂಜಾ ವಶಕ್ಕೆ ಪಡೆದ ಖಾಕಿ; ಎಸ್ಪಿ ನೇತೃತ್ವದಲ್ಲಿ ವಿಲೇವಾರಿ
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 12 ಪ್ರಕರಣಗಳಲ್ಲಿ ಒಟ್ಟು 7 ಕೆಜಿ 100 ಗ್ರಾಂ ಗಾಂಜಾವನ್ನು ಸೆ.26 ರ ಶುಕ್ರವಾರ ಮಧ್ಯಾಹ್ನ ವಶಪಡಿಸಿಕೊಂಡು ವಿಲೇವಾರಿ ಮಾಡಲಾಯಿತು. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ವಿವಿಧ ಇಲಾಖೆಯ ಅಧಿಕಾರಿಗಳ ಸಮಕ್ಷಮದಲ್ಲಿ ಗಾಂಜಾವನ್ನು ರಾಯಚೂರಿನ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವಿಲೇವಾರಿ ಮಾಡಿದರು. ಗಾಂಜಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಎಸ್ಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು