ಹುಮ್ನಾಬಾದ್: ಬೆಳೆಹಾನಿ ಸಮೀಕ್ಷೆ ಪ್ರಗತಿಯಲ್ಲಿದೆ ರೈತರಿಗೆ ಶೀಘ್ರ ಪರಿಹಾರ ಸಿಗುತ್ತೆ : ಕುಮಾರಚಿಂಚೋಳಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾಶರ್ಮಾ
Homnabad, Bidar | Oct 22, 2025 ಅತಿವೃಷ್ಟಿಯಿಂದ ಎಲ್ಲೆಡೆ ಆಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರ ರೈತರ ಖಾತೆಗೆ ಪರಿಹಾರ ಹಣ ಜಮಾ ಆಗುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾಶರ್ಮಾ ತಿಳಿಸಿದರು. ತಾಲೂಕಿನ ಕುಮಾರಚಿಂಚೋಳಿಯಲ್ಲಿ ಮಂಗಳವಾರ ರಾತ್ರಿ 10.30 ಕ್ಕೆ ಜರುಗಿದ ಬೀರಲಿಂಗೇಶ್ವರ 72ನೇ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೂಜ್ಯ ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಅಂಕುಶ್ ಗುರೂಜಿ ಅವರು ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನ ಸಮಿತಿ ಪದಾಧಿಕಾರಿಗಳು ಇದ್ದರು.