ಉಡುಪಿ: ಗ್ಯಾರಂಟಿ ಯೋಜನೆಗಳ ಮರುಸರ್ವೇಗೆ ಸೂಚನೆ; ಅರ್ಹರು ಹೊರಗುಳಿಯದಂತೆ ಎಚ್ಚರಿಕೆ
Udupi, Udupi | Sep 25, 2026 ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ಮನೆ-ಮನೆಗೆ ಭೇಟಿ ನೀಡಿ ಸರ್ವೇ ನಡೆಸಲು ಅಶೋಕ್ ಕುಮಾರ್ ಕೊಡವೂರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.