ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಿಲ್ಲಾಸ್ಪತ್ರೆಯ ಅಭಿವೃದ್ಧಿಗಾಗಿ ಬರೋಬ್ಬರಿ 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ವಾಸ್ತವ ಅರಿಯದೇ ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಅವರು ಶನಿವಾರ ಮಧ್ಯಾಹ್ನ 2ಕ್ಕೆತೀವ್ರ ವಾಗ್ದಾಳಿ ಮಾಡಿದ್ದಾರೆ.