ಶಿರಹಟ್ಟಿ: ತಾಲೂಕಿನ ವಡವಿ ಹೊಸೂರು ಗಾಮದಲ್ಲಿ ಪ್ರೇಮಿಗಳ ಆತ್ಮಹತ್ಯೆ: ಶಿರಹಟ್ಟಿ ಪೋಲೀಸ ಠಾಣೆಯಲ್ಲಿ ಪ್ರಕರಣ ದಾಖಲು
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ವಡವಿ-ಹೊಸೂರು ಗ್ರಾಮದ ಹೊರವಲಯದಲ್ಲಿ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರವಿವಾರ ನಡೆದಿದೆ ಎನ್ನಲಾಗಿದ್ದು, ಮೃತಪಟ್ಟ ಪ್ರೇಮಿಗಳು ಅದೇ ಗ್ರಾಮದ ವಿಶ್ವನಾಥ (೩೨) ಹಾಗೂ ಲಕ್ಷ್ಮಿ (೧೭) ಎಂಬುವರು ಎಂದು ತಿಳಿದು ಬಂದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರನ್ನು ವಿಚಾರಿಸಿದಾಗ ಇಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದ ವಿಷಯ ತಿಳಿದು ಬಂದಿದೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.