ಶಿರಹಟ್ಟಿ: ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಲು ಮುಂದಾದ ಶಿರಹಟ್ಟಿ ಪಿಎಸ್‌ಐ ಶಿವಾನಂದ ಲಮಾಣಿ
ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರು ಗ್ರಾಮದ ಹೊರವಲಯದ ಹೊಲವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಲು ಪೋಲೀಸ್ ಇಲಾಖೆ ಮುಂದಾಗಿದ್ದು, ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಶಿವಾನಂದ ಲಮಾಣಿ ಹಾಗೂ ಪೋಲೀಸ್ ಸಿಬ್ಬಂದಿಗಳೊಂದಿಗೆ ರವಿವಾರ ಸಂಜೆ ೦೫ ಗಂಟೆಗೆ ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರು ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಒಟ್ಟು ೦೪ ಟ್ರಾö್ಯಕ್ಟರ್ ೦೧ ಜೆಸಿಬಿಯನ್ನು ವಶಪಡಿಸಿಕೊಂಡು ಪ್ರÀ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.