ಹರಪನಹಳ್ಳಿ: ಉಚ್ಚಂಗಿದುರ್ಗದಲ್ಲಿ ದಸರಾ ಹಬ್ಬದ ಭದ್ರತಾ ಪರಿಶೀಲನೆ ನಡೆಸಿದ ಡಿವೈಎಸ್ಪಿ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಉತ್ಸವದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ. ಸಂತೋಷ ಚವ್ಹಾಣ ಅವರು ಭದ್ರತಾ ಪರಿಶೀಲನೆ ನಡೆಸಿದ್ದಾರೆ. ದೇವಿ ಉತ್ಸವದ ಮಾರ್ಗ ಮತ್ತು ಬನ್ನಿಮುಡಿಯುವ ಸ್ಥಳಗಳನ್ನು ಪರಿಶೀಲಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.